ಪುಂಜಾಲಕಟ್ಟೆ ಪೊಲೀಸರಿಂದ ಕೂರ್ನಡ್ಕ ನಿವಾಸಿಯ ಬಂಧನ

0

ಪುತ್ತೂರು:ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೂರ್ನಡ್ಕ ನಿವಾಸಿಯೋರ್ವರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ಅಬ್ದುಲ್ ರಹಿಮಾನ್ ಎಂಬವರ ಮಗ ಕೆ.ಹಂಝ ಬಂಧಿತ ಆರೋಪಿ.
ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 2013ರಲ್ಲಿ ನಡೆದಿದ್ದ ಪ್ರಕರಣದಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಹಂಝ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು.

ಮಾ.2ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಜಿ ಮತ್ತು ಶಾಮರಾಯ ಎಂಬವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

LEAVE A REPLY

Please enter your comment!
Please enter your name here