ಕೆಮ್ಮಾರ: ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಮೆಟ್ರಿಕ್ ಮೇಳವು ಮಾ.2ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಾದ ವ್ಯವಹಾರಿಕ ಜ್ಞಾನವನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸುಮಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಬಗೆಯ ಮಾರಾಟ ಮಳಿಗೆಗಳನ್ನು ತೆರೆಯಲಾಗಿತ್ತು.
ಮಾರಾಟ ಮಳಿಗೆಗಳಲ್ಲಿ ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಜಯಶ್ರೀ. ಎಮ್. ರವರು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.