ಪುತ್ತೂರು: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಹಾಜರಾಗುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್‌ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಆದರೆ, ಹಿಜಾಬ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಪರೀಕ್ಷೆಯ ಸಮಯದಲ್ಲಿ ಹಿಜಾಬ್‌ಗೆ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.