ಪುತ್ತೂರು: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮಾ.1ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ನೌಕರರು ಮುಷ್ಕರ ಹಿಂಪಡೆದಿರುವುದರಿಂದ ಮುಂದೂಡಿರುವ ಪರೀಕ್ಷೆಯನ್ನು ಮಾರ್ಚ್ 4ಕ್ಕೆ ನಿಗದಿಪಡಿಸಲಾಗಿದೆ. ಉಳಿದಂತೆ ಈ ಹಿಂದೆ ನಿಗದಿಪಡಿಸಿರುವ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ರಾಜು ಕೃಷ್ಣ ತಿಳಿಸಿದ್ದಾರೆ.