ಏ.1ರೊಳಗೆ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ : ಹೈಕೋರ್ಟ್ ಗೆ ರಾಜ್ಯ ಸರಕಾರದಿಂದ ಮಾಹಿತಿ

0

35 ಸಾವಿರ ಜನಸಂಖ್ಯೆಗೊಂದು ಜಿ.ಪಂ.ಕ್ಷೇತ
10 ಸಾವಿರ ಜನ ಸಂಖ್ಯೆಗೊಂದು ತಾ.ಪಂ.ಕ್ಷೇತ್ರ

ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ, ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ರಾಜ್ಯದ ಹಲವು ಗ್ರಾಮಗಳು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸೇರಿವೆ.ಕೆಲ ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯಿತಿಗಳಾಗಿ ರೂಪಿಸಲಾಗಿದೆ. ಇಂತಹ ಗ್ರಾಮಗಳನ್ನು ಕೈಬಿಟ್ಟು ಕ್ಷೇತ್ರಗಳನ್ನು ಪುನರ್ ವಿಂಗಡಿಸಲಾಗಿದೆ.ಕೆಲ ಜಿಲ್ಲೆಗಳ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಸದಸ್ಯರ ಸಂಖ್ಯೆ ಯಲ್ಲಿ ಕಡಿಮೆಯಾಗಿವೆ.ಕೆಲ ಜಿಲ್ಲೆಗಳಲ್ಲಿ ಹೆಚ್ಚಾಗಿವೆ.ಹಲವು ಕ್ಷೇತ್ರಗಳ ಸೀಮಾಗಡಿಯಲ್ಲಿ ವ್ಯತ್ಯಾಸವಾದರೂ, ಕ್ಷೇತ್ರ, ಸದಸ್ಯರ ಸಂಖ್ಯೆ ಯಥಾ ಸ್ಥಿತಿಯಲ್ಲಿವೆ. ಮೊದಲು 40 ಸಾವಿರ ಜನ ಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ, 10 ಸಾವಿರ ಜನಸಂಖ್ಯೆಗೆ ಒಂದು ತಾಲ್ಲೂಕು ಪಂಚಾಯಿತಿ ಕ್ಷೇತ್ರ ನಿಗದಿ ಮಾಡಲಾಗಿತ್ತು.ಹೊಸ ಆದೇಶದ ನಂತರ 35 ಸಾವಿರ ಜನ ಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ, 12,500 ಜನ ಸಂಖ್ಯೆಗೆ ಒಂದು ತಾಲ್ಲೂಕು ಪಂಚಾಯಿತಿ ಕ್ಷೇತ್ರ ರಚಿಸಲಾಗಿದೆ.

ಬೆಂಗಳೂರು: ಮುಂಬರುವ ಜಿ.ಪಂ., ತಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ 1ರ ಒಳಗಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಜಿಲ್ಲಾ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದ ಸರ್ಕಾರ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ನೀಡಿತ್ತು.ಇದಕ್ಕಾಗಿ, ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿಯನ್ನು ಸರ್ಕಾರ ತಂದಿತ್ತು.ಇದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂತು.ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು ಈ ಕುರಿತ ಮಾಹಿತಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು.

ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರ ಮಾ.1ರಂದು ಜಿಲ್ಲಾ,ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಯ ಅಧಿಸೂಚನೆ ಹೊರಡಿಸಿದೆ.ಏ.1ರೊಳಗೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿ ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.ಚುನಾವಣೆ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ವಿಽಸಿದ ರೂ.5 ಲಕ್ಷ ದಂಡವನ್ನೂ ಸರ್ಕಾರ ಪಾವತಿಸಿದೆ.ಕ್ಷೇತ್ರ ಮರು ವಿಂಗಡಣೆ ಅಽಸೂಚನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗದ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ.ಹಾಗಾಗಿ,ಅರ್ಜಿ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಲಾಗುತ್ತಿದೆ ಎಂದು ತಿಳಿಸಿತು.

ಸರಕಾರದಿಂದ ಹೈಕೋರ್ಟ್ಗೆ ಅಽಸೂಚನೆ ಪ್ರತಿ:

ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಹೈಕೋರ್ಟ್ ಗೆ ಅಧಿಸೂಚನೆ ಪ್ರತಿಯನ್ನು ಸಲ್ಲಿಸಿದೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ.ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿದೆ.

ರಾಜ್ಯ ಚುನಾವಣಾ ಆಯೋಗವು 2021ರಲ್ಲಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯಕ್ಕೆ ನಿರ್ದೇಶನ ಕೋರಿ ಪಿಐಎಲ್ ಸಲ್ಲಿಸುವ ಮೂಲಕ ಹೈಕೋರ್ಟ್ ಮನವಿ ಮಾಡಿತ್ತು.ಚುನಾವಣಾ ಪ್ರಕ್ರಿಯೆ ವಿಳಂಬಕ್ಕೆ ಅಸಮಾಧಾನಗೊಂಡಿದ್ದ ಹೈಕೋರ್ಟ್ 2022ರ ಡಿಸೆಂಬರ್ 14ರಂದು ಸರಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿತ್ತು
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ¿ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಂತು.

ಕ್ಷೇತ್ರಗಳ ಪುನರ್ವಿಂಗಡಣೆ ಕುರಿತು ಸರಕಾರ ಹೊರಡಿಸಲಿರುವ ಅಽಸೂಚನೆ ಪ್ರತಿಯನ್ನು ಸರಕಾರದ ಕಡೆಯಿಂದ ನ್ಯಾಯಪೀಠಕ್ಕೆ ಸಲ್ಲಿಸಿ, ಈ ವರದಿಯ ಆಧಾರದಲ್ಲಿ ಅಧಿಸೂಚನೆ ಹೊರಡಿಸುವುದಕ್ಕೆ ಸರ್ಕಾರ ಸಿದ್ದವಿದೆ.ಮುಂದಿನ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದ್ದರು.

LEAVE A REPLY

Please enter your comment!
Please enter your name here