ವಿಟ್ಲ: ಕಂಬಳಬೆಟ್ಟು ಗುಡ್ಡಕ್ಕೆ ಬೆಂಕಿ

0

ವಿಟ್ಲ: ಪುತ್ತೂರು – ವಿಟ್ಲ ರಸ್ತೆಯ ಕಂಬಳಬೆಟ್ಟು ಸಮೀಪದ ಗುಡ್ಡವೊಂದರಲ್ಲಿ ಬೆಂಕಿ‌ ಕಾಣಿಸಿಕೊಂಡ ಘಟನೆ ಮಾ.4ರಂದು ನಡೆದಿದೆ.

ಘಟನೆಯ ಬಗ್ಗೆ ಮಾಹಿತಿ ಅರಿತ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು ಬೆಂಕಿ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

LEAVE A REPLY

Please enter your comment!
Please enter your name here