ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠೆ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

0

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠೆ ಹಾಗೂ ದೈವದಕೋಲವು ಮಾ.9 ರಂದು ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.

ಮಾ.9 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಪ್ರಾಸಾದ ಶುದ್ದಿ,ಶ್ರೀ ಮಹಾಗಣಪತಿ ಹೋಮ ,ಕಲಶ ಪೂಜೆ ನಡೆಯಲಿದೆ. ಬೆಳಿಗ್ಗೆ 7.48ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀರಾಜಗುಳಿಗನ ಶಿಲಾ ಪ್ರತಿಷ್ಠೆ, ಕಲಶಾಭಿಷೇಕ ,ತಂಬಿಲ ಸೇವೆ ,ಮಹಾಪೂಜೆ ,ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 8 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸಾನಿಧ್ಯ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here