ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸೋನು ಜೋಯಿ ನೆಲ್ಯಾಡಿಯಲ್ಲಿ ಬಂಧನ

0

ನೆಲ್ಯಾಡಿ: ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ನೆಲ್ಯಾಡಿ ಬಸ್‌ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ವಾಲಾಡಿ ನಿವಾಸಿ ಸೋನು ಜೋಯಿ(32ವ.)ಬಂಧಿತ ಆರೋಪಿ. ಈತನ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸಿ.ಸಿ 445/2016 ಕಲಂ: 143,147,148, 504,506,447,427 ಜೊತೆಗೆ 149 IPC ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ವಾರಂಟ್ ಜಾರಿಗೊಳಿಸಲಾಗಿತ್ತು. ಆದರೆ ಈತ 2 ವರ್ಷದಿಂದ ತಲೆಮರೆಸಿಕೊಂಡಿದ್ದ. ಈತನ ಬಂಧನ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸರು ಮಾ.6ರಂದು ಮಧ್ಯಾಹ್ನ 12.45ಕ್ಕೆ ಕಡಬ ತಾಲೂಕಿನ ನೆಲ್ಯಾಡಿ ಬಸ್ಸು ತಂಗುದಾಣದಲ್ಲಿ ದಸ್ತಗಿರಿ ಮಾಡಿದ್ದಾರೆ.

ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಅನಿಲ್‌ಕುಮಾರ್ ಡಿ. ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಹೆಡ್‌ಕಾನ್ಸ್‌ಸ್ಟೇಬಲ್‌ಗಳಾದ ರಾಜೇಶ್, ಮಂಜುನಾಥ್ ಹಾಗೂ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನರವರು ನೆಲ್ಯಾಡಿಯಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here