ಉಪ್ಪಿನಂಗಡಿ: 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಹಳೆಗೇಟು ದಡ್ಡುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಭಾನುವಾರ ನಡೆಯಿತು.
ಕಂಬಳ ಕರೆಯ ಬಳಿ ನಡೆಸ ಸಭೆಯಲ್ಲಿ ಕಂಬಳಕ್ಕಾಗಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಲಾಯಿತ್ತಲ್ಲದೇ, ಆಗ ಬೇಕಿರುವ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರು ಮಾತನಾಡಿ, ಹಿಂದಿಗಿಂತಲೂ ಅದ್ದೂರಿಯ ವ್ಯವಸ್ಥೆಯೊಂದಿಗೆ ಈ ಬಾರಿಯ ಕಂಬಳ ಕ್ರೀಡೆಯನ್ನು ನಡೆಸಬೇಕಿದೆ. ಕಂಬಳ ಆರಂಭಕ್ಕೆ ಮುನ್ನ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ಸನ್ನಿಧಿಯಿಂದ ಕಂಬಳದ ಕೋಣಗಳನ್ನು ಮೆರವಣಿಗೆಯೊಂದಿಗೆ ಕಂಬಳ ಕರೆಗೆ ಕರೆದುಕೊಂಡು ಬರಬೇಕು. ಕಂಬಳ ಸಮಿತಿಯ ಸದಸ್ಯರು ಅವರವರ ಜವಾಬ್ದಾರಿಯನ್ನು ಅರಿತುಕೊಂಡು ಕೆಲಸ ಮಾಡಬೇಕು. ಆಗ ಮಾತ್ರ ಕಂಬಳ ಯಶಸ್ವಿಯಾಗಿ ನಡೆಯಲು ಸಾಧ್ಯ ಎಂದರು.
ಸಭೆಯಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ನಂದಾವರ ಉಮೇಶ್ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಶೆಟ್ಟಿ ಅರ್ಪಿಣಿಗುತ್ತು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಸಂಚಾಲಕ ಶಶಿಕುಮಾರ್ ರೈ ಬಾಳ್ಯೊಟ್ಟುಗುತ್ತು, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಶಿವಪ್ರಸಾದ್ ರೈ ಮಠಂತಬೆಟ್ಟು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ವಿಜಯ ಪೂಜಾರಿ ಚೀಮುಳ್ಳು, ದಿಲೀಪ್ ಶೆಟ್ಟಿ ಕರಾಯ, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು, ಶಿವರಾಮ ಶೆಟ್ಟಿ ಗೋಳ್ತಮಜಲು, ಸಮಿತಿಯ ನಿಹಾಲ್ ಪಿ. ಶೆಟ್ಟಿ, ಸತೀಶ್ ಶೆಟ್ಟಿ ಹೆನ್ನಾಳ, ಜಗದೀಶ್ ಪರಕಜೆ, ಜಯಾನಂದ ಗೌಡ, ಕೃಷ್ಣಪ್ಪ ಪೂಜಾರಿ, ಅಶೋಕ್ ಪೂಜಾರಿ ಬೇರಿಕೆ ಮತ್ತಿತರರು ಉಪಸ್ಥಿತರಿದ್ದರು.