ರಾಜ್ಯ ವಿಧಾನ ಸಭಾ ಚುನಾವಣೆ-2023; ಚುನಾವಣಾ ಅಧಿಕಾರಿಗಳ ನೇಮಕ

0

ಪುತ್ತೂರು:ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗ ಸಿದ್ಧತಾ ಕಾರ್ಯ ನಡೆಸುತ್ತಿದ್ದು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳನ್ನು ನೇಮಿಸಿ ಅಧಿಸೂಚನೆ ಹೊರಡಿಸಿದೆ.

ಈ ವಿಚಾರ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಯಾಗಿ ಉಪವಿಭಾಗದ ಸಹಾಯಕ ಆಯುಕ್ತರನ್ನು ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರನ್ನು ಹಾಗೂ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಡಿಯುಡಿಸಿ ಯೋಜನಾ ನಿರ್ದೇಶಕರನ್ನು ಚುನಾವಣಾಧಿಕಾರಿಯಾಗಿ ಗೊತ್ತುಪಡಿಸಲಾಗಿದೆ.

LEAVE A REPLY

Please enter your comment!
Please enter your name here