ಉಪ್ಪಿನಂಗಡಿ: ಗೃಹ ರಕ್ಷಕದಳದ ಜಿಲ್ಲಾ ಸಮಾದೇಷ್ಟರ ಭೇಟಿ

0

ಉಪ್ಪಿನಂಗಡಿ: ಗೃಹ ರಕ್ಷಕ ದಳ ಉಪ್ಪಿನಂಗಡಿ ಘಟಕದ ವಾರದ ಕವಾಯತಿಗೆ ಗೃಹ ರಕ್ಷಕದಳದ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ಮಾಡಿದರಲ್ಲದೆ, ಚುನಾವಣಾ ಪೂರ್ವ ಸಿದ್ಧತಾ ಸಭೆಯನ್ನು ನಡೆಸಿದರು.


ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ ಡಾ. ಮುರಳಿ ಮೋಹನ್ ಚೂಂತಾರುರವರು, ಸಿಬ್ಬಂದಿಯ ಕುಂದು- ಕೊರತೆಗಳನ್ನು ಆಲಿಸಿದರಲ್ಲದೆ, ಮುಂಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ಗೃಹರಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಚುನಾವಣೆ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗೆ ಅಂಚೆ ಮತದಾನದ ಮೂಲಕ ಮತ ಚಲಾವಣೆ ಮಾಡಲು ಇಲಾಖಾ ಮುಖಾಂತರ ವ್ಯವಸ್ಥೆ ಮಾಡಲಾಗುವುದು ಎಂದರು.


ಈ ಸಂದರ್ಭದಲ್ಲಿ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಗೃಹ ರಕ್ಷಕದಳದ ಜಿಲ್ಲಾ ಸಮಾದೇಷ್ಟರಿಗೆ ಗೌರವ ವಂದನೆ ಸಲ್ಲಿಸಿದರು. ಎಎಸ್‌ಎಲ್ ಜನಾರ್ದನ ಆಚಾರ್ಯ ವಂದಿಸಿದರು. ಈ ಸಂದರ್ಭದಲ್ಲಿ ಘಟಕದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here