





ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂದಿರದ 30ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ಮಾ.7ರಂದು ರಾತ್ರಿ ಭಜನಾ ಕಾರ್ಯಕ್ರಮ ನಡೆದಿದ್ದು, ಮಾ.8ರಂದು ಬೆಳಿಗ್ಗೆ ಗಣಹೋಮ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ನಾಗ ಮತ್ತು ದೈವಗಳಿಗೆ ತಂಬಿಲ ಸೇವೆ, ಪ್ರಸಾದ ವಿತರಣೆ, ಸಾಯಂಕಾಲ ಶ್ರೀ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ಬಳಿಕ ಊರಿನ ಮಕ್ಕಳಿಂದ ಕುಣಿತ ಭಜನೆ, ರಾತ್ರಿ ಶ್ರೀ ರಕ್ತೇಶ್ವರಿ, ಶ್ರೀ ಕಲ್ಲುರ್ಟಿ ಮತ್ತು ಶ್ರೀ ಗುಳಿಗ ದೈವಗಳ ನಡಾವಳಿ ಜರಗಲಿದೆ. ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.





ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶ್ರೀ ದೇವರ ಹಾಗೂ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ನಂದಿಕೇಶ್ವರ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








