ಬಲ್ನಾಡು ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

0

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಮಾ.2ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹವನ, ಚಕ್ರಾಬ್ಜ ಮಂಡಲ ವಿಷ್ಣುಪೂಜೆ, ದೈವಗಳಿಗೆ ಸಂಬಂಧಪಟ್ಟ ಕಟ್ಟೆ ಮನೆಯ ನಾಗ ಸಾನಿಧ್ಯದಲ್ಲಿ ನಾಗ ತಂಬಿಲ, ಮಧ್ಯಾಹ್ನ ಕಲಶಪೂಜೆ, ಕಲಶಾಭಿಷೇಕ, ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಶ್ರೀ ದೈವಗಳ ಭಂಡಾರ ತೆಗೆದು ದೈವಸ್ಥಾನಗಳಿಗೆ ತೆರಳಿ ತಂಬಿಲ ಸೇವೆಗಳು ನಡೆಯಿತು.

ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಸದಸ್ಯರು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here