ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ವಿದಾಯ ಸಮಾರಂಭ

0

ಪುತ್ತೂರು:- ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳೊಲ್ಲೊಂದಾದ ದರ್ಬೆ, ಫಿಲೋನಗರ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಸಮಾರಂಭ ಕಾರ್ಯಕ್ರಮ ಮಾ.7ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅತಿ. ವಂ| ಲಾರೆನ್ಸ್ ಮಸ್ಕರೇನ್ಹಸ್ ಅವರು ವಿದ್ಯಾರ್ಥಿಗಳು ಮೌಲ್ಯಯುತ ಗುಣನಡತೆಗಳನ್ನು ತಮ್ಮದಾಗಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಮುನ್ನೆಡೆಯಬೇಕೆಂದು ಹಾರೈಸಿದರು.

ವೇದಿಕೆಯಲ್ಲಿ ಫಿಲೋಮಿನಾ ಕ್ಯಾಂಪಸ್ ನಿರ್ದೇಶಕ ವಂ| ಸ್ಟಾನಿ ಪಿಂಟೊರವರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮೌರಿಸ್ ಕುಟಿನ್ಹಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗನ್ನಿವಾಸ್ ರಾವ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಕಾರ್ಮಿನ್ ಪಾಯಸ್ ಸ್ವಾಗತಿಸಿ , ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿ ನಾಯಕ ನಿಕ್ಷೇಪ್ ಕೃಷ್ಣ ಶಾಲೆಯ ಬಗ್ಗೆ ತನ್ನ ಉತ್ತಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 9ನೇ ತರಗತಿಯ ನಿದಿಶಾ ರೈ ಹತ್ತನೇ ತರಗತಿಯ ವಿದ್ಯಾರ್ಥಿಗಳ ಒಡನಾಟದ ಬಗ್ಗೆ ವಿವರಿಸಿದರು.

ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ಉಪನಾಯಕಿ ಸಮನ್ವಿಕಾ ವಂದಿಸಿ ,ಒಂಭತ್ತನೇ ತರಗತಿಯ ಶ್ರೇಯಾ ನಿರೂಪಿಸಿದರು.

LEAVE A REPLY

Please enter your comment!
Please enter your name here