ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳ ಸಭೆ

0

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳ ಸಭೆ ಮಾ.6ರಂದು ಪುತ್ತೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.


ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ, ಎಸ್‌ಡಿಪಿಐ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಭಾಗವಹಿಸಿ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿಇಬ್ರಾಹಿಂ ಸಾಗರ್, ಕಾರ್ಯದರ್ಶಿ ಅಬ್ದುಲ್ ರಹೀಂ, ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು ಹಾಗೂ ವಿವಿಧ ಮಟ್ಟದ ಮಟ್ಟದ ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here