ಮಾ.11: ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ

0

ಪುತ್ತೂರು: ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀಮಹಾವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ 41ನೇ ವರ್ಷದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಮಾ.11ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳಿಗ್ಗೆ 9ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಾಭಿಷೇಕ, ಸೀಯಾಳಾಭಿಷೇಕ, ನಾಗ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ, ಸಂಜೆ 7 ರಿಂದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here