ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ನೀರು ಮತ್ತು ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮವು ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ವಹಿಸಿದ್ದರು. ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಸಂವಹನ ಅಧಿಕಾರಿ ಮಹಂತೇಶ್ ಜಲಜೀವನ್ ಮಿಷನ್ ನ ಬಗ್ಗೆ ಮಾಹಿತಿ ನೀಡಿದರು. ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಂಕರ್ ಭಟ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯ ವಿಠಲ ಗೌಡ ಅಗಳಿ, ಬೆಳಂದೂರು ಗ್ರಾ. ಪಂ.ಪಿಡಿಓ ನಾರಾಯಣ್, ಗ್ರಾ. ಪಂ. ಸದಸ್ಯರಾದ ಜಯಂತ ಅಬೀರ, ಉಮೇಶ್ವರಿ ಅಗಳಿ, ಜಲಜೀವನ್ ಮಿಷನ್ ಯೋಜನೆಯ ಸಮುದಾಯ ಸಂಘಟಕರಾದ ಸ್ಮಿತಾ ಎನ್. ಎಸ್, ಜಲಜೀವನ್ ಮಿಷನ್ ಯೋಜನೆಯ ಇಂಜಿನಿಯರ್ ಅಶ್ವಿನ್ ಎ. ಎಸ್ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಲೆಕ್ಕ ಸಹಾಯಕಿ ಸುನಂದಾರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಜಲಸಂರಕ್ಷಣೆ-ಪ್ರಬಂಧ ಸ್ಪರ್ಧೆ ಹಾಗೂ ಜಾಗತಿಕ ತಾಪಮಾನ-ಭಾಷಣ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.