ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

0

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ ಪುತ್ತೂರಿನ ಎಪಿಎಂಸಿ ರಸ್ತೆಯ ಸಿಟಿ ಆಸ್ಪತ್ರೆ ಬಳಿಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಪ್ರಫುಲ್ಲಾ ಗಣೇಶ್ ರವರಿಗೆ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿನ ಕ್ಷೇತ್ರಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ “ವಿದ್ಯಾದಾಯಿನಿ” ಬಿರುದು ಪ್ರದಾನ ಮಾಡಲಾಯಿತು.

ಸಾಧನೆಗೆ ಸಂದ ಪುರಸ್ಕಾರ:
ಪ್ರಫುಲ್ಲಾ ಗಣೇಶ್ ರವರು ದಕ್ಷಿಣ ಕನ್ನಡ ಮತ್ತು ಇತರ ಜಿಲ್ಲೆಯ 62 ವಿವಿಧ ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ “Maths Shortcut Tricks and Tips” ಕುರಿತು ಉಚಿತ ಕಾರ್ಯಾಗಾರಗಳನ್ನು ಯಶಸ್ವಿಯಾಗಿ ನಡೆಸಿರುತ್ತಾರೆ. ಸರ್ಕಾರಿ ಪ್ರಾಥಮಿಕ ಶಾಲೆಗೆ ಉಚಿತವಾಗಿ ಅಬಾಕಸ್ ತರಬೇತಿ, ಅನೇಕ ಯೂನಿವರ್ಸಿಟಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಹಲವಾರು ವಿಷಯಗಳ ಬಗ್ಗೆ ತರಬೇತಿ ನೀಡುತ್ತಿರುವ ಇವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಇಲಾಖೆಯ ಸಹಭಾಗಿತ್ವದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಯನ್ನು ನೀಡಿರುತ್ತಾರೆ. ಉದ್ಯೋಗಾಕಾಂಕ್ಷಿಗಳಿಗೆ ನಿರಂತರ ಉದ್ಯೋಗ ಮಾಹಿತಿ ಮತ್ತು ಉದ್ಯೋಗದ ಹಾದಿ ತೋರಿಸಿ ಕೊಟ್ಟಿರುತ್ತಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಇರಾ ನೇಮು ಪೂಜಾರಿ ವಹಿಸಿದ್ದರು. ಹಿರಿಯ ಪತ್ರಕರ್ತ ಗಣೇಶ್ ಪ್ರಸಾದ್ ಪಾಂಡೇಲು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಜಯಾನಂದ ಅಂಚನ್, ಕಾಸರಗೋಡು ಜಿಲ್ಲಾ ಚು.ಸಾ.ಪ ಅಧ್ಯಕ್ಷ ಶಿವರಾಮ ಕಾಸರಗೋಡು, ಸತ್ಯ ಶಾಂತ ಪ್ರತಿಷ್ಠಾನದ ಅಧ್ಯಕ್ಷೆ ಶಾಂತಾ ಕುಂಟಿನಿ,ಕಂಕನಾಡಿ ಬ್ರಹ್ಮ ಬೈದ್ಯರ್ಕಳ ಗರೋಡಿ ಕ್ಷೇತ್ರದ ಮೊಕ್ತೇಸರ ಜೆ ದಿನೇಶ್ ಅಂಚನ್, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮಕರ ಕುಂಪಲ, ಶ್ರೀ ಗೋಕರ್ಣ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಸ್ವಾಗತಿಸಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ ವಂದಿಸಿದರು. ಲತೀಶ್ ಸಂಕೊಳಿಗೆ, ಉಮೇಶ್ ಕಾರಂತ್, ಅರ್ಚನಾ ಎಂ ಕುಂಪಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here