ಪುತ್ತೂರು:ಮುಂಡೂರು ಗ್ರಾಮದ ಶ್ರೀ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವಕ್ಕೆ ಮಾ.7ರಿಂದ 9 ರ ತನಕ ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಮಾ.7ರಂದು ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಪ್ರವೇಶ ರಾತ್ರಿ ರಂಗಪೂಜೆ ನಡೆಯಿತು. ಇದೇ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ಧಾರ್ಮಿಕ ಅಧ್ಯಯನ ಕೇಂದ್ರಕ್ಕೆ ಪುಸ್ತಕಗಳ ಸಮರ್ಪಣೆಗೊಂಡು ಗ್ರಂಥಾಲಯದಲ್ಲಿ ಅಧ್ಯಯನಕ್ಕೆ ಚಾಲನೆ ನೀಡಲಾಯಿತು.
ಮಾ.8ರಂದು ಬೆಳಿಗ್ಗೆ ಕಲಶ ಪೂಜೆ, ನಾಗತಂಬಿಲ, ದೈವಗಳಿಗೆ ತಂಬಿಲ, ಕಲಶಾಭಿಷೇಕ, ನಾಗ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತ೦ಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ನಂತರ ಶ್ರೀದೇವರ ಬಲಿ ಹೊರಟು, ಉತ್ಸವ, ವಸಂತ ಕಟ್ಟೆಪೂಜೆ, ಬೆಡಿಮದ್ದು ಪ್ರದರ್ಶನ, ಶ್ರೀದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆದ ಬಳಿಕ ಕ್ಷೇತ್ರದ ದೈವಗಳಾದ ಉಳ್ಳಾಕುಲು, ರಕ್ತಶ್ವರಿ, ವ್ಯಾಘ್ರ ಚಾಮುಂಡಿ, ವರ್ಣರ ಪಂಜುರ್ಲಿ, ಬೊಟ್ಟಿಭೂತ, ಗುಳಿಗ ದೈವಗಳ ನೇಮೋತ್ಸವ ನಡೆಯಿತು. ಮಾ.9ರಂದು ಕಲಶ, ಆರಾಧನೆ, ಮಧ್ಯಾಹ್ನ ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆಯೊಂದಿಗೆ ಜಾತೋತ್ಸವ ಕಾರ್ಯಕ್ರಮಗಳು ಸಂಪನ್ನಗೊಂಡಿತು