ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ: ಪುತ್ತೂರು ಬಿಜೆಪಿ ಕಚೇರಿ ಮುಂದೆ ವಿಜಯೋತ್ಸವ

0


ಪುತ್ತೂರು: ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಾ.9 ರಂದು ಬೆಳಿಗ್ಗೆ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಎಸ್ ಅಪ್ಪಯ್ಯ ಮಣಿಯಾಣಿ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರಸಭೆ ಉಪಾಧ್ಯಕ್ಷೆ ವಿದ್ಯಾಗೌರಿ, ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here