ಬೆಟ್ಟಂಪಾಡಿ: ಪ್ರಿಯದರ್ಶಿನಿಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

0

ಬೆಟ್ಟಂಪಾಡಿ: ಇಲ್ಲಿನ‌ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮ ಮಾ. 7 ರಂದು ನಡೆಯಿತು.

ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 9ನೇ ತರಗತಿ ವಿದ್ಯಾರ್ಥಿನಿ ಅಭಿಜ್ಞ ಹತ್ತನೇ ತರಗತಿ ವಿದ್ಯಾರ್ಥಿಗಳೊಂದಿಗಿನ ಒಡನಾಟದ ಅನುಭವ ಹಂಚಿಕೊಂಡರು. 10ನೇ ತರಗತಿ ವಿದ್ಯಾರ್ಥಿನಿ ಶಾಲಾ ನಾಯಕಿ ಸಿಂಚನ ಕೆ ಎಸ್.‌ ,ಅಪರ್ಣ ಅಡಿಗ, ಹಾಗೂ ಪ್ರಾಪ್ತಿ ಅನಿಸಿಕೆ ವ್ಯಕ್ತಪಡಿಸಿದರು. ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶುಭಕರ ರೈ ಬೈಲಾಡಿ ಶುಭ ಹಾರೈಸಿದರು. ಮುಖ್ಯಗುರು ರಾಜೇಶ್ ಎನ್. ಪ್ರಾಸ್ತಾವಿಕ ಮಾತುಗಳೊಂದಿಗೆ ಮಕ್ಕಳ ಭವಿಷ್ಯಕ್ಕೆ ಶುಭ ಕೋರಿದರು.

ಸಹ ಶಿಕ್ಷಕ ಪ್ರಶಾಂತ್ ಎನ್. ಸ್ವಾಗತಿಸಿ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎಸ್. ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. 9 ನೇ ತರಗತಿ ವಿದ್ಯಾರ್ಥಿನಿ ಹರ್ಷ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here