ಅಡಿಕೆ ಕಳವು ಪ್ರಕರಣ ಆರೋಪಿಗೆ ಜಾಮೀನು

0

ಪುತ್ತೂರು: ಅಂಗಡಿಯಿಂದ ಅಡಿಕೆ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2014ರಲ್ಲಿ ಬಂಟ್ವಾಳದ ಕಾಪಿಕಾಡು ಎಂಬಲ್ಲಿ ಅಂಗಡಿಯಿಂದ ಅಡಿಕೆ ಕಳವಾಗಿತ್ತು. ಪ್ರಕರಣದ ಆರೋಪಿಯಾದ ಸುರತ್ಕಲ್ ಕಾಟಿಪಳ್ಳ ನಿವಾಸಿ ಮೋಕ್ಸಿನ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಇದೀಗ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ಮೋಹಿನಿ ಕೆ ವಾದಿಸಿದ್ದರು.

LEAVE A REPLY

Please enter your comment!
Please enter your name here