ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರ.ಕಾರ್ಯದರ್ಶಿ ಶಿಹಾಬ್ ರಾಜೀನಾಮೆ

0

ಪುತ್ತೂರು: ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಶಿಹಾಬ್ ನೆಯ್ಯಡ್ಕ ಅವರು ತಮ್ಮ ಹುದ್ದೆಗೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಶ್ರಫ್ ಕಲ್ಲೇಗ ಅವರಿಗೆ ನೀಡಿರುವ ರಾಜೀನಾಮೆ ಪತ್ರದಲ್ಲಿ ಅವರು ತಿಳಿಸಿದ್ದಾರೆ. ‌

ನಾನು ಕಳೆದ 12 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಕಳೆದ ಐದು ವರ್ಷಗಳಿಂದ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ವೈಯಕ್ತಿಕ ಕಾರಣಗಳಿಂದ ಇದೀಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶಿಹಾಬ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here