ಪುತ್ತೂರು: ವರ್ತಕರ ಸಂಘ ಕುಂಬ್ರ ಮತ್ತು ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮಾ.19ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಶಿಬಿರ ನಡೆಯಲಿದ್ದು ಉದ್ಯಮಿ ಮೋಹನದಾಸ ರೈ ಕುಂಬ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಎಂ, ಸುಳ್ಯ ಡೆಂಟಲ್ ಕಾಲೇಜಿನ ಪ್ರೊ.ಕೃಷ್ಣಪ್ರಸಾದ್ ಎಲ್, ಕುಂಬ್ರ ಸಿಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಪತ್ರಕರ್ತ ಸಿಶೇ ಕಜೆಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ದಂತ ಕುಳಿ ತುಂಬಿಸುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಉಚಿತವಾಗಿ ದೊರೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಆಮಂತ್ರಣ ಪತ್ರಿಕೆ ಬಿಡುಗಡೆ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ.10 ರಂದು ಕುಂಬ್ರ ನ್ಯೂ ಫ್ಯಾಮಿಲಿ ಕಾಂಪ್ಲೆಕ್ಸ್ನಲ್ಲಿರುವ ವರ್ತಕರ ಸಂಘದ ಕಛೇರಿಯಲ್ಲಿ ಹಿರಿಯ ವರ್ತಕ ಮಹಮ್ಮದ್ ಬೊಳ್ಳಾಡಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ರಫೀಕ್ ಅಲ್ರಾಯ, ಕಾರ್ಯದರ್ಶಿ ಭವ್ಯ ರೈ, ಸ್ಥಾಪಕಾಧ್ಯಕ್ಷ ಶ್ಯಾಮ್ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕುರಿಕ್ಕಾರ, ಮೆಲ್ವಿನ್ ಮೊಂತೆರೋ, ದಿವಾಕರ ಶೆಟ್ಟಿ, ಪದಾಧಿಕಾರಿಗಳಾದ ಹನೀಫ್, ರಮೇಶ್ ಆಳ್ವ ಕಲ್ಲಡ್ಕ ಉಪಸ್ಥಿತರಿದ್ದರು.