ಪುತ್ತೂರು:ಯಂಗ್ ಬ್ರಿಗೇಡ್ ಸೇವಾ ದಳದ ವತಿಯಿಂದ ಕಿಲ್ಲೆ ಮೈದಾನದಲ್ಲಿ ಎರಡು ದಿನ ರಾಜೀವ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ ಹಾಗೂ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಟ್ರೋಫಿಯ ಮೆರವಣಿಗೆ ಹಾಗೂ ಬೃಹತ್ ಆಟೋರಿಕ್ಷಾ ಜಾಥಾ ಮಾ.10ರಂದು ನಡೆಯಿತು.
ದರ್ಬೆ ವೃತ್ತದ ಬಳಿಯಿಂದ ಹೊರಟ ಮೆರವಣಿಗೆಗೆ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿಯವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಜಾಥಾವು ಮುಖ್ಯ ರಸ್ತೆಯ ಮೂಲಕ ಸಾಗಿ ಶ್ರೀಧರ ಭಟ್ ಅಂಗಡಿ ಬಳಿಯಿಂದಾಗಿ ತೆರಳಿ ಕಿಲ್ಲೆಮೈದಾನದಲ್ಲಿ ಸಮಾಪನಗೊಂಡಿತು.
ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಕೆಪಿಸಿಸಿಯ ಧನಂಜಯ ಅಡ್ಪಂಗಾಯ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ ಸೋಜ, ನಗರ ಸಭಾ ಸದಸ್ಯ ರಿಯಾಝ್, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ಬ್ಲಾಕ್ ಕಾಂಗ್ರೆಸ್ ನಿಟಕಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಪ್ರಮುಖರಾದ ಸಿದ್ದೀಕ್ ಸುಲ್ತಾನ್, ಇಸ್ಮಾಯಿಲ್ ಬೊಳುವಾರು, ಶರೂನ್ ಸಿಕ್ವೇರಾ, ವಿಶ್ವಜಿತ್ ಅಮ್ಮುಂಜ, ಮಾಧವ ಗೌಡ ಕಾಮದೇನು, ಪ್ರಹ್ಲಾದ್ ಬೆಳ್ಳಿಪ್ಪಾಡಿ ಸೇರಿದಂತೆ ಹಲವು ಮಂದಿ ಪಕ್ಷದ ಕಾರ್ಯಕರ್ತರು ಹಾಗೂ ಆಟೋ ರಿಕ್ಷಾ ಚಾಲಕರು ಉಪಸ್ಥಿತರಿದ್ದರು.
ಆಟೋ ಜಾಥಾದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದಿವ್ಯಪ್ರಭಾ ಚಿಲ್ತಡ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ ವಿಶ್ವನಾಥ ರೈ ಸೇರಿದಂತೆ ಪಕ್ಷದ ನಾಯಕರುಗಳು ಆಟೋ ರಿಕ್ಷಾದಲ್ಲಿ ತೆರಳುವ ಮೂಲಕ ಎಲ್ಲರ ಗಮನ ಸೆಳೆದರು.