ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಎ.10ರಿಂದ ಆರಂಭಗೊಳ್ಳುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರವನ್ನು ಮಾ.11ರಂದು ದೇವಳದ ಸತ್ಯಧರ್ಮ ನಡೆಯಲ್ಲಿ ದೇವರಿಗೆ ಸಮರ್ಪಣೆ ಮಾಡಿ ಬಿಡುಗಡೆ ಮಾಡಲಾಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಜಾತ್ರೋತ್ಸವದ ಯಶಸ್ವಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ವೀಣಾ ಬಿ.ಕೆ, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ, ಬಿ.ಐತ್ತಪ್ಪ ನಾಯ್ಕ್, ಶೇಖರ್ ನಾರಾವಿ, ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಪುರಸಭಾ ಅಧ್ಯಕ್ಷ ಲೋಕೇಶ್ ಹೆಗ್ಡೆ, ರಾಜೇಶ್ ಬನ್ನೂರು, ಪಿ.ಜಿ.ಚಂದ್ರಶೇಖರ್ ರಾವ್, ಸುದರ್ಶನ್, ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here