ಪುತ್ತೂರಿಗೆ ಕುಡಿಯುವ ನೀರಿನ ಸಮಸ್ಯೆ ಆಗದು-ಜೀವಂಧರ್ ಜೈನ್
ಪುತ್ತೂರು:ಪುತ್ತೂರು ನಗರಕ್ಕೆ ನೀರೊದಗಿಸಲು ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಸಮೀಪ ಕುಮಾರಧಾರಾ ನದಿಗೆ ನಿರ್ಮಿಸಿರುವ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷರು ಮತ್ತು ಅಧಿಕಾರಿಗಳು ಮಾ.10ರಂದು ಭೇಟಿ ನೀಡಿ ಪರಿಶೀಲಿಸಿದ್ದಾರೆ.
12 ವರ್ಷಗಳ ಹಿಂದೆ ಕುಡ್ಸೆಂಪ್ ಯೋಜನೆಯಡಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಲ್ಲಿ ಕಳೆದ ಬಾರಿಗಿಂತ ಈ ಬಾರಿ ನೀರಿನ ಒಳ ಹರಿವು ಕಡಿಮೆ ಆಗಿದೆ. ಆದರೂ ಪುತ್ತೂರು ಪಟ್ಟಣಕ್ಕೆ ಕುಡಿಯುವ ನೀರಿನ ಅಭಾವ ಆಗಿಲ್ಲ.
ಜನತೆ ನೀರನ್ನು ಪೋಲು ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಸುವಂತೆ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ತಿಳಿಸಿದ್ದಾರೆ. ಪೌರಾಯುಕ್ತ ಮಧು ಎಸ್ ಮನೋಹರ್ ಸಹಿತ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.