ಮಾ.13ಕ್ಕೆ ಧಾರ್ಮಿಕ ಶಿಕ್ಷಣ ಕೇಂದ್ರಗಳ ಬೋಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಡೆಯುತ್ತಿರುವ 15 ಧಾರ್ಮಿಕ ಶಿಕ್ಷಣ ಕೇಂದ್ರಗಳ ಬೋಧಕರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿಗಳಿಗೆ ಏರ್ಪಡಿಸಿದ ರಸಪ್ರಶ್ನಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಮಾ.13ರಂದು ದೇವಳದ ಆಡಳಿತ ಕಚೇರಿ ಮಂಡಳಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮ ಸಂಜೆ ಗಂಟೆ 4ಕ್ಕೆ ನಡೆಯಲಿದ್ದು, ಧಾರ್ಮಿಕ ಶಿಕ್ಷಣ ಕೇಂದ್ರಗಳ ಬೋಧಕರು ಮತ್ತು ಸ್ಪರ್ಧಾ ವಿಜೇತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here