ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ’ ರಾಜ್ಯದ ವಿವಿಧೆಡೆ ಸಾಗಿದಂತೆ ಪುತ್ತೂರಿಗೆ ಮಾ.11ರಂದು ಆಗಮಿಸಿದ್ದು, ಪುತ್ತೂರು ತಾಲೂಕು ಗಡಿ ಪ್ರದೇಶವಾದ ಪೆರ್ನಾಜೆಯಲ್ಲಿ ಸ್ವಾಗತಿಸಿದ ಬಳಿಕ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ವಿಜಯ ಸಂಕಲ್ಪ ಸಮಾವೇಶದ ಸ್ಥಳದ ತನಕ ಅದ್ದೂರಿಯ ಮೆರವಣಿಗೆ ನಡೆಯಿತು.
ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಳದ ಬಳಿಯಲ್ಲಿ ಸಂಕಲ್ಪ ಯಾತ್ರೆಯ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಯಾತ್ರೆ 1 ರ ಸಹ ಸಂಚಾಲಕ ದತ್ತಾತ್ರೆಯ, ಕಿಶೋರ್, ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ,ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಪುತ್ತೂರು ವಿಧಾನಸಭಾ ಚುನಾವಣಾ ಪ್ರಭಾರಿ ರಾಜೇಶ್ ಕಾವೆರಿ, ರಾಮದಾಸ್ ಬಂಟ್ವಾಳ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ದೇವದಾಸ್ ಶೆಟ್ಟಿ, ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷ ಆರ್ ಸಿ ನಾರಾಯಣ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಯಾತ್ರೆಯ ಪುತ್ತೂರು ಸಂಚಾಲಕ ಸುನಿಲ್ ಕುಮಾರ್ ದಡ್ಡು, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.