ನೆಲ್ಯಾಡಿ ಗ್ರಾ.ಪಂ.: ಮಹಿಳಾ ದಿನಾಚರಣೆ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ ಹಾಗೂ ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನೆಲ್ಯಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.


ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟದ ಅಧ್ಯಕ್ಷೆ ಹೇಮಾವತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಪುಷ್ಪಾವತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ, ಪಿಡಿಒ ಮಂಜುಳ ಎನ್., ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ನಮಿತಾರವರು ಸಂದರ್ಭೋಚಿತವಾಗಿ ಮಾತನಾಡಿದರು. ಗ್ರಾ.ಪಂ.ಸದಸ್ಯರಾದ ಆನಂದ ಪಿಲವೂರು, ರವಿಪ್ರಸಾದ್ ಶೆಟ್ಟಿ, ಸಲಾಂ ಪಡುಬೆಟ್ಟು, ಮಹಮ್ಮದ್ ಇಕ್ಬಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಸ್ತ್ರೀಶಕ್ತಿ ಸಂಘದ ಸದಸ್ಯೆ, ಮಹಿಳೆಯರು ಸಭೆಯಲ್ಲಿ ಉಪಸ್ಥಿತರಿದ್ದರು. ವನಜ ಸ್ವಾಗತಿಸಿದರು. ಲೈಲಾ ತೋಮಸ್ ಕಾರ್ಯಕ್ರಮ ನಿರೂಪಿಸಿದರು. ನಳಿನಾಕ್ಷಿ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here