1.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

0

ಶಾಶ್ವತ ವ್ಯವಸ್ಥೆಯೊಂದಿಗೆ ಜನರ ಬೇಡಿಕೆಗಳಿಗೆ ಸ್ಪಂದನೆ-ಎಸ್.ಅಂಗಾರ

ಕಾಣಿಯೂರು: ಪೊಲೀಸ್ ಠಾಣೆಗಳು ಕಡಿಮೆ ಆಗಬೇಕಿದೆ. ಅದಾಗಲೇ ಜನರಲ್ಲಿ ಭಾವನೆ ಬದಲಾಗಲು ಸಾಧ್ಯ. ವಿದ್ಯಾವಂತರ ಸಂಖ್ಯೆ ಹೆಚ್ಚಳವಾಗುತ್ತಿದೆ, ಪ್ರಕರಣಗಳು ಹೆಚ್ಚಳವಾಗುತ್ತಿದೆ. ಯಾಕೆ ಈ ರೀತಿ ಆಗುತ್ತಿದೆ ಎಂಬ ಬಗ್ಗೆ ಯೋಚನೆ ಮಾಡಬೇಕಾದ ಅಗತ್ಯತೆ ಇದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ 1.32ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡವನ್ನು ಮಾ 13 ರಂದು ಉದ್ಘಾಟಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳ್ಳಾರೆಯಲ್ಲಿದ್ದ ಪೊಲೀಸ್ ಠಾಣೆಗೆ ಹೊಸ ಠಾಣಾ ಕಟ್ಟಡ ಆಗಬೇಕೆಂಬ ಬೇಡಿಕೆ ಇತ್ತು. ಆದರೆ ಸರಕಾರ ಶಾಶ್ವತ ವ್ಯವಸ್ಥೆ ಕಲ್ಪಿಸುವ ಮೂಲಕ ಬೇಡಿಕೆ ಈಡೇರಿಸಿದೆ. ಶಾಶ್ವತ ವ್ಯವಸ್ಥೆಗೆ ಸಮಯ ತಗುಲಬಹುದು. ಆದರೆ ಸರಕಾರ ಸದಾ ಶಾಶ್ವತ ಪರಿಹಾರ ವ್ಯವಸ್ಥೆಗಳ ಬಗ್ಗೆ ಕ್ರಮಕೈಗೊಳ್ಳುತ್ತದೆ ಎಂದರು. ಬೆಳ್ಳಾರೆ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ 3.5 ಕೋಟಿ ರೂ. ವೆಚ್ಚದಲ್ಲಿ ಪೊಲೀಸರ ವಸತಿಗೃಹ ನಿರ್ಮಾಣವಾಗಲಿದೆ ಎಂದ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಹೊಸ ಕಟ್ಟಡ ನಿರ್ಮಾಣಕ್ಕೂ ಚಾಲನೆ ನೀಡಲಾಗಿದ್ದು ಕಾಮಗಾರಿ ಆರಂಭಗೊಂಡಿದೆ ಎಂದರು.


ಬದಲಾವಣೆ, ಸಹಕಾರ ಅಗತ್ಯ:
ಇಂದು ಸರಕಾರಿ ಜಾಗಗಳ ಒತ್ತುವರಿಯಾಗುತ್ತಿದೆ. ಕಂದಾಯ ಇಲಾಖೆಯೇ ಬೇರೆ ಇಲಾಖೆಗಳಿಗೆ ಜಾಗ ನೀಡಬೇಕು. ಆದರೆ ಎಷ್ಟೋ ಕಡೆಗಳಲ್ಲಿ ಗ್ರಾಮಕರಣಿಕರ ಕಚೇರಿಯ ಕಟ್ಟಡ ನಿರ್ಮಾಣಕ್ಕೇ ಜಾಗ ಇಲ್ಲ ಎಂಬ ಸ್ಥಿತಿ ಕಾಣಬಹುದು. ನಾವು ಬದಲಾವಣೆ ಆಗಬೇಕು. ಯಾವುದೇ ಜಾಗ ಒತ್ತುವರಿ ಆಗದಂತೆ ನೋಡಿಕೊಳ್ಳಲು ಸಹಕಾರ ನೀಡಬೇಕಿದೆ ಎಂದು ಸಚಿವ ಅಂಗಾರ ಹೇಳಿದರು. ಸುಳ್ಯ ಪ್ರಭಾರ ತಹಶೀಲ್ದಾರ್ ಜಿ.ಮಂಜುನಾಥ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಬಿ.ಕಾಂ ವಿದ್ಯಾರ್ಥಿನಿ ಗಾಯತ್ರಿ ಪ್ರಾರ್ಥಿಸಿದರು. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ್ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್.ಎನ್. ವಂದಿಸಿದರು. ಬೆಳ್ಳಾರೆ ಪೊಲೀಸ್ ಅಧಿಕಾರಿ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಾರೆ ಠಾಣಾ ಆರಕ್ಷಕ ಉಪನಿರೀಕ್ಷಕ ಸುಹಾಸ್, ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

3.5 ಕೋಟಿ ರೂ ವೆಚ್ಚದಲ್ಲಿ ಪೊಲೀಸರ ವಸತಿ ಗೃಹ ನಿರ್ಮಾಣ
ಬೆಳ್ಳಾರೆ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ 3.5 ಕೋಟಿ ರೂ ವೆಚ್ಚದಲ್ಲಿ ಪೊಲೀಸರ ವಸತಿ ಗೃಹ ನಿರ್ಮಾಣವಾಗಲಿದೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಹೊಸ ಕಟ್ಟಡ ನಿರ್ಮಾಣಕ್ಕೂ ಚಾಲನೆ ನೀಡಲಾಗಿದ್ದು ಕಾಮಗಾರಿ ಆರಂಭಗೊಂಡಿದೆ.
ಎಸ್ ಅಂಗಾರ, ಸಚಿವರು

LEAVE A REPLY

Please enter your comment!
Please enter your name here