ಪುತ್ತೂರು: ಕಾಂಗ್ರೆಸ್ ಸರ್ವೆ ಬೂತ್ ಸಂಖ್ಯೆ 193ವತಿಯಿಂದ ಸೊರಕೆಯಲ್ಲಿ ಮನೆ-ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಸರ್ವೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ ವಸಂತರವರು ಗ್ಯಾರಂಟಿ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.
ಹಲವಾರು ಮನೆಗಳಿಗೆ ತೆರಳಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ವಿತರಿಸಿ ಕಾಂಗ್ರೆಸ್ ಘೋಷಿಸಿರುವ ಯೋಜನೆಗಳನ್ನು ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್‌ಗೆ ಮತ ನೀಡುವಂತೆ ವಿನಂತಿಸಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯ ರಾಮಚಂದ್ರ ಸೊರಕೆ, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯೆ ಸೌಮ್ಯಾ ಆರ್ ಕಂಬಳಿ, ಬೂತ್ 193 ಸಮಿತಿ ಅಧ್ಯಕ್ಷ ಮಜೀದ್ ಬಾಳಾಯ, ಕಾಂಗ್ರೆಸ್ ಕಾರ್ಯಕರ್ತರಾದ ಸಂಜೀವ ನಾಯ್ಕ ಸೊರಕೆ, ಲಿಂಗಪ್ಪ ಸೊರಕೆ, ಧನಂಜಯ ಸೊರಕೆ ಉಪಸ್ಥಿತರಿದ್ದರು.