ರಸಗೊಬ್ಬರ ಮಾರಾಟ: ಉಪ್ಪಿನಂಗಡಿ ಸಿಎ ಬ್ಯಾಂಕ್‌ಗೆ ಪ್ರಶಸ್ತಿ

0

ಉಪ್ಪಿನಂಗಡಿ: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘವು ಪ್ರಾದೇಶಿಕ ಮಟ್ಟದಲ್ಲಿ ರಸಗೊಬ್ಬರ ಮಾರಾಟದಲ್ಲಿ ಆರ್‌ಸಿಎಫ್ ಕಂಪೆನಿಯಿಂದ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಎಲ್ಲಾ ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿರುವ ಉಪ್ಪಿನಂಗಡಿಯ ಸಹಕಾರಿ ಸಂಘವು ರಸಗೊಬ್ಬರ ಮಾರಾಟದಲ್ಲಿಯೂ ಆರ್‌ಸಿಎಫ್ ಕಂಪೆನಿಯಿಂದ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಅವರಿಗೆ ಸಂಘದ ಪರವಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಸಿಬ್ಬಂದಿ ಪ್ರವೀಣ್ ಆಳ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here