ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ವಕೀಲ ಭಾಸ್ಕರ ಗೌಡ ಕೋಡಿಂಬಾಳ ನೇಮಕ

0

ಪುತ್ತೂರು: ದ.ಕ.ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಗೆ ಸಂಯೋಜಕರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶಿಸಿದೆ.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಭರತ್ ಮುಂಡೋಡಿಯವರ ಶಿಫಾರಸ್ಸಿನ ಮೇರೆಗೆ, ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್‌ರವರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಗೆ ಸಂಯೋಜಕರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಲಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಪುತ್ತೂರಿನ ವಕೀಲ ಭಾಸ್ಕರ ಗೌಡ ಕೋಡಿಂಬಾಳ ಹಾಗೂ ಸದಸ್ಯರುಗಳಾಗಿ ಸಾಯಿರ ಕೆ. ಝುಬೇರ್, ಮಹಮ್ಮದ್ ಬಡಗನ್ನೂರು, ಕೃಷ್ಣಪ್ರಸಾದ್ ಆಳ್ವ, ಪ್ರಹ್ಲಾದ್ ಬಿ., ಪಿ.ಪಿ. ವರ್ಗೀಸ್‌ರವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಹ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here