ಮಂಗಳೂರು ವಿವಿಯಿಂದ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಯು.ಕೆ.ಮೋನುರವರಿಗೆ ಗೌರವ ಡಾಕ್ಟರೇಟ್

0

ಮಾ.15ರ ಘಟಿಕೋತ್ಸವದಲ್ಲಿ ಪದವಿ ಪ್ರದಾನ

ವಿಟ್ಲ: ಮಂಗಳೂರು ವಿಶ್ವವಿದ್ಯಾನಿಲಯ(Mangalore University)ದ 41ನೇ ವಾರ್ಷಿಕ ಘಟಿಕೋತ್ಸವದ ಸಂದರ್ಭದಲ್ಲಿ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಯು.ಕೆ.ಮೋನುರವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ (Award of Honorary Doctorate Degrees) ಮಾಡಲು ಕುಲಾಧಿಪತಿ ಅನುಮೋದನೆ ನೀಡಿದ್ದಾರೆ ಎಂದು ವಿವಿಯ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರ, ಸಮಾಜ ಸೇವಾ ಕ್ಷೇತ್ರದ ಸಾಧಕ ಕುಂದಾಪುರ ಗಂಗೊಳ್ಳಿಯ ಜಿ.ರಾಮಕೃಷ್ಣ ಆಚಾರ್ ಮತ್ತು ಮಂಗಳೂರಿನ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ರವರು ಗೌರವ ಡಾಕ್ಟರೇಟ್ ಗೆ ಭಾಜನರಾಗಿದ್ದಾರೆ.

ಹಾಜಿ ಯು.ಕೆ.ಮೋನು ಮತ್ತು ಪ್ರೊ.ಎಂ.ಬಿ.ಪುರಾಣಿಕ್ ಅವರಿಗೆ ಶಿಕ್ಷಣ ಮತ್ತು ಸಮಾಜ ಸೇವೆಗಾಗಿ, ಅದೇ ರೀತಿ ಜಿ.ರಾಮಕೃಷ್ಣ ಆಚಾರ್ ಅವರಿಗೆ ಕೃಷಿ, ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ. ಮಾ.15ರಂದು ನಡೆಯುವ ಮಂಗಳೂರು ವಿವಿಯ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಯು.ಕೆ.ಮೋನುರವರು ಹಲವಾರು ವರುಷಗಳ ಹಿಂದೆ ಕಣಚೂರು‌ ಸಮೂಹ ಸಂಸ್ಥೆಯನ್ನು‌ ಹುಟ್ಟುಹಾಕಿ ಹಲವಾರು ಸಮಾಜಮುಖಿ ಚಿಂತನೆಗಳ ಮೂಲಕ ಹಲವರಿಗೆ ಸಹಕಾರ ನೀಡುತ್ತಾ ಬಂದವರಾಗಿದ್ದಾರೆ. ಇವರ ಸಮಾಜಮುಖಿ ಕಾರ್ಯಗಳಿಗಾಗಿ ಹಲವಾರು ವೇದಿಕೆಯಲ್ಲಿ ಇವರನ್ನು ಗೌರವಿಸಲಾಗಿತ್ತು. ಇದೀಗಾಗಲೇ ಅವರು ತಮ್ಮ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹಲವಾರು ಬಗೆಯ ಉಚಿತ ಶಿಬಿರಗಳನ್ನು ಆಯೋಜನೆ‌ ಮಾಡಿ ‌ಆ ಮೂಲಕ ಹಲವಾರು ಬಡ ಮಂದಿಗೆ ಸಹಾಯ ಹಸ್ತಚಾಚುತ್ತಿದ್ದಾರೆ.

LEAVE A REPLY

Please enter your comment!
Please enter your name here