ಪುತ್ತೂರು: ಮಾ.16ರಂದು ಮಂಗಳೂರಿನಲ್ಲಿ ರಾಜ್ಯದ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಸುಮಾರು 100 ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತದಿಂದ ಕೋರಿಕೆ ಬಂದಿರುತ್ತದೆ. ಆದರಂತೆ ಸದರಿ ಕಾರ್ಯಕ್ರಮಕ್ಕೆ ನಿಗಮದ ಬಸ್ಸುಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗಿರುತ್ತದೆ.
ಆದುದರಿಂದ ಸದರಿ ದಿನದಂದು ಪುತ್ತೂರು. ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾದ್ಯತೆಯಿರುತ್ತದೆ. ಈ ದಿಶೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕೆಂದು ಕ.ರಾ.ರ.ಸಾ.ನಿ. ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.