ಡೊನ್ ಬೊಸ್ಕೊ ಕ್ಲಬ್ ನಿಂದ ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಿಗೆ ಸನ್ಮಾನ

0

ಪುತ್ತೂರು:ಮಾಯಿದೆ ದೇವುಸ್ ಚರ್ಚ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಡೊನ್ ಬೊಸ್ಕೊ ಕ್ಲಬ್ ನಿಂದ ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಾಗೂ ಕ್ಲಬ್ ಸದಸ್ಯರೂ ಆಗಿರುವ ಜೆರಾಲ್ಡ್ ಡಿ’ಕೋಸ್ಟರವರಿಗೆ ಸನ್ಮಾನ ಕಾರ್ಯಕ್ರಮವು ಮಾ.12 ರಂದು ಜರಗಿತು.

ಚಿತ್ರ: ಕ್ಲಾಸಿಕ್ಲಿಕ್ಸ್ ಪುತ್ತೂರು


ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಸಭಾಂಗಣದಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಜರಗಿತು.


ಈ ಸಂದರ್ಭದಲ್ಲಿ ಮಾಯಿದೆ ದೇವುಸ್ ಚರ್ಚ್ ನ ಆರ್ಥಿಕ ಸಮಿತಿಗೆ ಆಯ್ಕೆಯಾಗಿರುವ ಕ್ಲಬ್ ನ ಮತ್ತೀರ್ವ ಸದಸ್ಯರಾದ ಮನೋಜ್ ಡಾಯಸ್ ಹಾಗೂ ಆಲನ್ ಮಿನೇಜಸ್ ರವರಿಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟರವರು, ಕ್ಲಬ್ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರ ಶ್ಲಾಘನೆಗೆ ವ್ಯಕ್ತವಾಗಿದ್ದು, ತಾನು ಈ ಕ್ಲಬ್ ನ ಸದಸ್ಯನಾಗಿರುವುದು ಹೆಮ್ಮೆ ಎನಿಸುತ್ತಿದೆ. ಮುಂದಿನ ದಿನಗಳಲ್ಲಿ ತಾನು ಕ್ಲಬ್ ನ ಅಭಿವೃದ್ಧಿ ನಿಟ್ಟಿನಲ್ಲಿ ನಿರಂತರ ಸಹಕರಿಸಲಿದ್ದೇನೆ ಎಂದು ಹೇಳಿ ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.


ಸನ್ಮಾನಿತರ ಪರವಾಗಿ ಉಪಾಧ್ಯಕ್ಷ ಪ್ರಕಾಶ್ ಸಿಕ್ವೇರಾರವರು ಮಾತನಾಡಿ ಶುಭ ಹಾರೈಸಿದರು. ಕ್ಲಬ್ ನ ಹಿರಿಯ ಸದಸ್ಯರು ನೂತನ ಉಪಾಧ್ಯಕ್ಷರನ್ನು ಸನ್ಮಾನಿಸಿದರು. ಕ್ಲಬ್ ಅಧ್ಯಕ್ಷ ಫೆಬಿಯನ್ ಗೋವಿಯಸ್, ಕೋಶಾಧಿಕಾರಿ ರೋಯ್ಸ್ ಪಿಂಟೋ ಸಹಿತ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂತನ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟರವರು ಭೋಜನದ ಪ್ರಾಯೋಜಕತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here