ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಗುರುಪರಿಚಯ ಇದ್ದಲ್ಲಿ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸುಮಾರು 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮಾ.13ರಂದು ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಒಳಗಡೆ ತೀವ್ರ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಕುಸಿದು ಬಿದಿದ್ದರು. ತಕ್ಷಣ ಅವರನ್ನು ಅಲ್ಲಿದ್ದವರು ಆಟೋ ರಿಕ್ಷಾವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದರು.

ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವ್ಯಕ್ತಿಯ ಗುರುತು ಪರಿಚಯವಿದ್ದಲ್ಲಿ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here