ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಉಪಾಧ್ಯಕ್ಷರಾಗಿ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಅಗರ್ತಬೈಲು ನಿವಾಸಿ ಆಂಬ್ರೋಸ್ ಡಿ’ಸೋಜರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಂರವರ ಶಿಫಾರಸ್ಸಿನಂತೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಖಾದರ್ ರವರು ಆದೇಶ ಹೊರಡಿಸಿದ್ದು ಮತ್ತು ತಕ್ಷಣಕ್ಕೆ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಆಂಬ್ರೋಸ್ ಡಿ’ಸೋಜರವರು ಬಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾಗಿ, ಬಲ್ನಾಡು ಸಿಎ ಬ್ಯಾಂಕ್ ನಿರ್ದೇಶಕರಾಗಿ, ಬಲ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಪುತ್ತೂರು ಮಾಯಿದೆ ದೇವುಸ್ ಚರ್ಚ್ ನ ಗುಂಡ್ಯಡ್ಕ ವಾಳೆಯ ಪ್ರತಿನಿಧಿಯಾಗಿ, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿಯ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.