ನೂಜಿಬಾಳ್ತಿಲ ಹೇರ ಭಾಗದಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಹರಸಾಹಸ

0

ಕಡಬ :ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರ, ಎಳುವಾಳೆ ಭಾಗದಲ್ಲಿ ಕಾಡ್ಗಿಚ್ಚು ನಿಯಂತ್ರಣ ಇನ್ನು ಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ.

ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಭಾರೀ ಪ್ರಮಾಣದಲ್ಲಿ ಉರಿಯುತ್ತಿದ್ದು, ರಾತ್ರಿ ವೇಳೆ ಬೆಂಕಿ ಉರಿಯುವುದು ಸ್ಪಷ್ಟವಾಗುತ್ತಿದೆ. ಬೆಂಕಿ ವಿಸ್ತರಿಸದಂತೆ ಇಲಾಖೆ ವತಿಯಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಹೆಚ್ಚಿನ ಪ್ರಮಾಣದಲ್ಲಿ ಹರಡದಂತೆಯೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here