ಕಡಬ :ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರ, ಎಳುವಾಳೆ ಭಾಗದಲ್ಲಿ ಕಾಡ್ಗಿಚ್ಚು ನಿಯಂತ್ರಣ ಇನ್ನು ಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ.
![](https://puttur.suddinews.com/wp-content/uploads/2023/03/%E0%B2%A8%E0%B3%82%E0%B2%9C%E0%B2%BF2-14.jpg)
ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಭಾರೀ ಪ್ರಮಾಣದಲ್ಲಿ ಉರಿಯುತ್ತಿದ್ದು, ರಾತ್ರಿ ವೇಳೆ ಬೆಂಕಿ ಉರಿಯುವುದು ಸ್ಪಷ್ಟವಾಗುತ್ತಿದೆ. ಬೆಂಕಿ ವಿಸ್ತರಿಸದಂತೆ ಇಲಾಖೆ ವತಿಯಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಹರಡದಂತೆಯೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.