ಪುತ್ತೂರು: ಕರ್ನಾಟಕ ರಾಜ್ಯ ಮಾಸ್ಟರ್ ಕ್ರೀಡಾಕೂಟದ ಹಿರಿಯರ ವಿಭಾಗದಲ್ಲಿ ರಾಷ್ಟ್ರಮಟ್ಟಕೆ ಆಯ್ಕೆಯಾದ ಅಬ್ದುಲ್ ಲತೀಫ್ ಸಾಹೇಬ್‌ರವರನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.
ಕೋಲಾರ ಜಿಲ್ಲೆಯ ಪೊಲೀಸ್ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಮಾಸ್ಟರ್ ಕ್ರೀಡಾಕೂಟದ ಹಿರಿಯರ ವಿಭಾಗದಲ್ಲಿ ಕಾವು ಮಾಡನ್ನೂರು ಗ್ರಾಮದ ಅಬ್ದುಲ್ ಲತೀಫ್ ಸಾಹೇಬ್‌ರವರು ಚಿನ್ನ ಬೆಳ್ಳಿ ಕಂಚು ಪದಕಗಳನ್ನು ಪಡೆದುಕೊಂಡಿದ್ದರು. ಹಿರಿಯರ ವಿಭಾಗದ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ, 200 ಮೀಟರ್ ಓಟದಲ್ಲಿ ಕಂಚಿನ ಪದಕ, 4*100 ರಿಲೇಯಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡು ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.
ಇವರ ಈ ಸಾಧನೆಯನ್ನು ಗುರುತಿಸಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಗೌರವಿಸಿ ಸನ್ಮಾನಿಸಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್ ಮಹಮ್ಮದ್ ಮಸೂದ್, ಸಮಿತಿಯ ಮುಖಂಡರುಗಳಾದ ಮಾಜಿ ಮೇಯರ್ ಅಶ್ರಫ್ ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಅಬ್ದುಲ್ ಲತೀಫ್ ರವರು ಉತ್ತಮ ಕ್ರೀಡಾಪಟುವಾಗಿದ್ದು ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸಮಾಜ ಸೇವಾ ಕಾರ್ಯಕ್ರಗಳನ್ನು ಮಾಡುತ್ತಿರುತ್ತಾರೆ. ಇವರು ಮಾಡನೂರು ಗ್ರಾಮದ ಉಗ್ರಾಣಿ ಫಕೀರ್ ಸಾಹೇಬ್ ಹಾಗೂ ಖತೀಜ ಬಿ. ದಂಪತಿಯ ಪುತ್ರರಾಗಿದ್ದಾರೆ.