ಕೋಡಿಂಬಾಡಿ ಪರನೀರು ನಿವಾಸಿಗಳಿಂದ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ

0

ಪುತ್ತೂರು: ಕೋಡಿಂಬಾಡಿ ಗ್ರಾ.ಪಂ. ವ್ಯಾಪ್ತಿಯ ಪರನೀರು ನಿವಾಸಿಗಳು 2023ರ ಚುನಾವಣೆ ಬಹಿಷ್ಕರಿಸಿ ಬ್ಯಾನರ್ ಅಳವಡಿಸಿದ್ದಾರೆ.

ಹಲವು ವರ್ಷಗಳ ನಮ್ಮ ಮೂಲಭೂತ ಸೌಕರ್ಯಗಳಲ್ಲೊಂದಾದ ರಸ್ತೆಯ ವ್ಯವಸ್ಥೆಯನ್ನು ಮಾಡಿಸಿಕೊಡಲು ಜನಪ್ರತಿನಿಧಿಗಳು, ಅಧಿಕಾರಿಗಳು, ಗ್ರಾಮಪಂಚಾಯತ್‌ನಿಂದ ಸಾಧ್ಯವಾಗಿಲ್ಲ. ಸಹಾಯಕ ಆಯುಕ್ತರು, ತಹಶೀಲ್ದಾರರು, ಗ್ರಾಮ ಪಂಚಾಯತ್ ಅವರು ಸರಕಾರಿ ಸ್ಥಳವನ್ನು ಪರಿಶೀಲನೆ ಮಾಡಿದರೂ ರಾಜಕೀಯ ವ್ಯಕ್ತಿಗಳಿಂದ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ನಾವು ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ಪರನೀರು ನಿವಾಸಿಗಳು ಕೋಡಿಂಬಾಡಿ ಅರ್ಬಿಯಲ್ಲಿ ಬ್ಯಾನರ್ ಅಳವಡಿಸಿದ್ದಾರೆ.

LEAVE A REPLY

Please enter your comment!
Please enter your name here