ಮಿತ್ತೂರಿನಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಪಾಟ್ರಕೋಡಿ ನಿವಾಸಿಗಳ ಕುರಿತು ಅವಹೇಳನಕಾರಿ ಭಾಷಣ ಆರೋಪ – ಸೂಕ್ತ ಕ್ರಮಕೈಗೊಳ್ಳುವಂತೆ ವಿಟ್ಲ ಠಾಣೆಗೆ ಮನವಿ

0

ವಿಟ್ಲ: ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವಹಿಂದೂ ಪರಿಷತ್ ಭಜರಂಗದಳದ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ನರಸಿಂಹ ಮಾಣಿರವರು ಒಂದು ಸಮುದಾಯದ ವಿರುದ್ಧ ಪ್ರಚೋದನಕಾರಿಯಾಗಿ ಭಾಷಣ ಮಾಡಿ ಶಾಂತಿ, ಸೌಹಾರ್ದತೆಗೆ ಧಕ್ಕೆ ತಂದಿದ್ದು ಅವರ ವಿರುದ್ಧ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಾಟ್ರಕೋಡಿ ನಿವಾಸಿಗಳು ವಿಟ್ಲ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.

ಮಾ.12ರಂದು ಮಿತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವಹಿಂದೂ ಪರಿಷತ್ ಭಜರಂಗದಳದ ವತಿಯಿಂದ ಬೃಹತ್ ಜನಜಾಗೃತಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಮಾತನಾಡಿದ ನರಸಿಂಹ ಮಾಣಿರವರು ತಮ್ಮ ಭಾಷಣದಲ್ಲಿ ಪಾಟ್ರಕ್ಕೋಡಿ ಒಂದು ಮಿನಿ ಪಾಕಿಸ್ತಾನ ಇದ್ದಂತೆ, ದೇಶದ್ರೋಹಿಗಳು, ದನಕಳ್ಳರು ನಿಲ್ಲುವಂತಹ ಜಾಗ ಅದು ಎಂಬ ಆರೋಪವನ್ನು ಮಾಡಿ ಶಾಂತಿ ಸೌಹಾರ್ದತೆ ಹಾಗೂ ಸಹಬಾಳ್ವೆ ನಡೆಸುವ ಪಾಟ್ರಕೋಡಿ ನಿವಾಸಿಗಳನ್ನು ಧರ್ಮದ ಆಧಾರದಲ್ಲಿ ಪರಸ್ಪರ ಎತ್ತಿ ಕಟ್ಟಿ ಹಿಂದೂ ಮುಸ್ಲಿಮರ ಮಧ್ಯೆ ಗಲಾಟೆ ಎಬ್ಬಿಸಲು ಪ್ರಯತ್ನ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಕಾರ್ಯಕ್ರಮದ ಆಯೋಜಕರ ಮೇಲೆ ಹಾಗೂ ನರಸಿಂಹ ಮಾಣಿಯವರ ಮೇಲೆ ಕ್ರಮ ಕೈಗೊಳ್ಳುವಂತೆ ಪಾಟ್ರಕೋಡಿ ನಿವಾಸಿಗಳು ವಿಟ್ಲ ಠಾಣಾ ಪೊಲೀಸರಿಗೆ ನೀಡಿರುವ ಮನವಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here