ಐದು, ಎಂಟನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಲು ಆಗ್ರಹ

0

ಪುತ್ತೂರು: ಕರ್ನಾಟಕ ಸರಕಾರವು ಈ ವರ್ಷದಿಂದ ಆರಂಭಿಸಲು ಉದ್ದೇಶಿಸಲಾದ, ಐದು ಮತ್ತು ಎಂಟನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಲು, ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಸರಕಾರವನ್ನು ಆಗ್ರಹಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊರೊನ ಕಾರಣದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ, ಇದೀಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ, ವಿದ್ಯಾರ್ಥಿಗಳ ಮೇಲೆ ಈ ಹೊರೆಯನ್ನು ಹಾಕಿ ಅವರ ಮಾನಸಿಕ ಸ್ಥೈರ್ಯವನ್ನು ಹೊಸಕಿ ಹಾಕುವ ಪ್ರಯತ್ನ ಇದಾಗಿದ್ದು, ಇದರಿಂದ ಮಕ್ಕಳು ಸೇರಿ ಅವರ ಹೆತ್ತವರು ತೀವ್ರ ಚಿಂತೆಗೆ ಒಳಗಾಗಿದ್ದಾರೆ.

ಈ ನಿಟ್ಟಿನಲ್ಲಿ ಸರಕಾರವು ಮಕ್ಕಳ ಮತ್ತು ಹೆತ್ತವರ ಹಿತದೃಷ್ಟಿಯಿಂದ, ಈ ವರ್ಷ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಮಕ್ಕಳಲ್ಲಿರುವ ಗೊಂದಲವನ್ನು ಬಗೆಹರಿಸಬೇಕಾಗಿ, ಅವರು ಆಗ್ರಹಿಸಿರುತ್ತಾರೆ.

LEAVE A REPLY

Please enter your comment!
Please enter your name here