ಪುತ್ತೂರು:ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಶ್ರೀ ದೇವರಿಗೆ ಅನುಜ್ಞಾ ಕಲಶವು ಮಾ.17ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಬ್ರಹ್ಮಶ್ರೀ ವೇ.ಮೂ.ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಜರುಗಲಿದೆ.
ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ವಿನಂತಿಸಿದ್ದಾರೆ.