ಪುತ್ತೂರು:5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ ವಿಭಾಗೀಯ ಪೀಠ ಅನುಮತಿ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ಶಾಲಾ ಗುಣಮಟ್ಟ, ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ.ಮಾ.27ರಿಂದ ಮಾ.30ರವೆರೆಗ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಮಾ.27ರಿಂದ ಏ.01ರವರೆಗೆ 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದವರು ಮಾಹಿತಿ ನೀಡಿದ್ದಾರೆ.
5ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ: ಮಾ.27:ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.ಮಾ.28:ದ್ವಿತೀಯ ಭಾಷೆ ಕನ್ನಡ, ಇಂಗ್ಲೀಷ್.ಮಾ.29:ಕೋರ್ ವಿಷಯ ಪರಿಸರ ಅಧ್ಯಯನ.ಮಾ.30:ಕೋರ್ ವಿಷಯ ಗಣಿತ
8ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ: ಮಾ.27:ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಇಂಗ್ಲೀಷ್(ಎನ್‌ಸಿಆರ್‌ಟಿ), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.ಮಾ.28:ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ.ಮಾ.29: ತೃತೀಯ ಭಾಷೆ ಹಿಂದಿ, ಹಿಂದಿ(ಎನ್‌ಸಿಆರ್‌ಟಿ), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.ಮಾ.೩೦:ಕೋರ್ ವಿಷಯ ಗಣಿತ. ಮಾ.31:ಕೋರ್ ವಿಷಯ ವಿಜ್ಞಾನ.ಏ.01:ಕೋರ್ ವಿಷಯ ಸಮಾಜ ವಿಜ್ಞಾನ.
ಮಾ.30 ರಂದು ನಡೆಯುವ ಗಣಿತ ವಿಷಯದ ಪರೀಕ್ಷೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ದಿನಗಳ ಪರೀಕ್ಷೆ ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿದೆ. ಪ್ರತಿ ಪರೀಕ್ಷೆಗೆ 2 ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ.