ನೆಲ್ಯಾಡಿ: ಕಡಬ ತಹಶೀಲ್ದಾರ್ರವರ ಗ್ರಾಮ ವಾಸ್ತವ್ಯ ಮಾ.18ರಂದು ನೆಲ್ಯಾಡಿ ಗ್ರಾಮದ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಮಾ.15ರಂದು ಸಂಜೆ ನೆಲ್ಯಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಕಡಬ ಉಪತಹಶೀಲ್ದಾರ್ ಗೋಪಾಲ ಅವರು ಗ್ರಾಮವಾಸ್ತವ್ಯದ ಕುರಿತು ಮಾಹಿತಿ ನೀಡಿದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳ ಬಗ್ಗೆ ಲಿಖಿತವಾಗಿ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಆಯಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳಿಂದ ಸಭೆಯಲ್ಲಿಯೇ ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.
ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ, ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಉಪತಹಶೀಲ್ದಾರ್ ಮನೋಹರ್, ಕಂದಾಯ ನಿರೀಕ್ಷಕ ಪೃಥ್ವಿರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಾ.ಪಂ.ಸದಸ್ಯರಾದ ರವಿಪ್ರಸಾದ್ ಶೆಟ್ಟಿ, ಮೊಹಮ್ಮದ್ ಇಕ್ಬಾಲ್, ರೇಷ್ಮಾಶಶಿ, ಶ್ರೀಲತಾ ಸಿ.ಹೆಚ್., ಉಷಾಜೋಯಿ, ಪುಷ್ಪಾ ಪಡುಬೆಟ್ಟು, ಸಲಾಂ ಪಡುಬೆಟ್ಟು ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ಸಭೆಯಲ್ಲಿ ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾ.ಪಂ.ಪಿಡಿಒ ಸ್ವಾಗತಿಸಿದರು. ಸಿಬ್ಬಂದಿಗಳು ಸಹಕರಿಸಿದರು.