ಪುಚ್ಚೇರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾದೇರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಕೆ.ವಿ.ಜಿ.ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದಿಕ್ ಕಾಲೇಜು ಮತ್ತು ಆಸ್ಪತ್ರೆ ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾ.12 ರಂದು ನೆಲ್ಯಾಡಿ ಗ್ರಾಮದ ಪುಚ್ಚೇರಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.


ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವ್ಯಕ್ತಿ ಮಾನಸಿಕ, ಸಾಮಾಜಿಕ ಹಾಗೂ ದೈಹಿಕವಾಗಿ ಸದೃಢರಾಗಿರಬೇಕು. ಈ ನಿಟ್ಟಿನಲ್ಲಿ 40 ವರ್ಷ ಮೇಲ್ಪಟ್ಟವರು ರಕ್ತ ಪರೀಕ್ಷೆ ಹಾಗೂ ತಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕೆಂದು ಹೇಳಿದರು.

ಸುಳ್ಯ ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಮತ್ತು ಹಾಸ್ಪಿಟಲ್‌ನ ಡಾ. ವೇಣು ಎನ್., ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಹಾಸ್ಪಿಟಲ್‌ನ ಡಾ.ರಂಗನಾಥ್ ಎನ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಪುಚ್ಚೇರಿ ಶಾಲಾ ಮುಖ್ಯಶಿಕ್ಷಕ ಪದ್ಮನಾಭ ಪಿ.,ರವರು ಸಂದರ್ಭೋಚಿತವಾಗಿ ಮಾತನಾಡಿದರು.

ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ.,ಅಧ್ಯಕ್ಷತೆ ವಹಿಸಿದ್ದರು. ಕೆವಿಜಿ ಮೆಡಿಕಲ್ ಕಾಲೇಜಿನ ಡಾ.ಗೋವಿಂದ, ಸೈಂಟ್ ಆಂಟೋನೀಸ್ ಅಸೋಸಿಯೇಟ್ಸ್ ಮಂಗಳೂರು ಇಲ್ಲಿನ ಪ್ರಶಾಂತ್ ಚಾಕೋ ಎಸ್., ನೆಲ್ಯಾಡಿ ಗ್ರಾ.ಪಂ.ಸದಸ್ಯ ಆನಂದ ಗೌಡ ಪಿಲವೂರು, ಪುಚ್ಚೇರಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಗೌಡ ಪುಚ್ಚೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಸ್ವಾಗತಿಸಿದರು. ಪ್ರಶಾಂತ್ ಕೊಪ್ಪ ವಂದಿಸಿದರು. ಲಕ್ಷ್ಮಣ ಇಚ್ಚೂರು ಕಾರ್ಯಕ್ರಮ ನಿರೂಪಿಸಿದರು. ಶ್ರೀ ರಕ್ಷಾ ಪ್ರಾರ್ಥಿಸಿದರು. ಶಿಕ್ಷಕ ಪುರಂದರ ಗೌಡ ಡೆಂಜ, ಗ್ರಾ.ಪಂ.ಸದಸ್ಯೆ ಶ್ರೀಲತಾ ಸಿ.ಹೆಚ್., ಸೇವಾಪ್ರತಿನಿಧಿಗಳಾದ ನಮಿತಾ ಎಸ್.ಶೆಟ್ಟಿ, ಹೇಮಾವತಿ ಜೆ., ಸುಮನ, ಕವಿತ, ಅನುಷಾ, ಸ್ಥಳೀಯ ಮುಖಂಡರಾದ ಬಾಲಕೃಷ್ಣ ಗೌಡ ದೋಂತಿಲ, ತುಕಾರಾಮ ರೈ, ಕುಸುಮ, ಜಗನ್ನಾಥ, ಲೈಲಾತೋಮಸ್, ಜಾನಕಿ, ಶಾಬು ಆರ್ಲ, ಪ್ರಮೋದ್ ಕೊಪ್ಪಮಾದೇರಿ, ಜೇಮ್ಸ್ ಆರ್ಲ, ಕೆವಿಜಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಆಶಾಕಾರ್ಯಕರ್ತೆಯರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.


ಆರೋಗ್ಯ ತಪಾಸಣೆ:
ಶಿಬಿರದಲ್ಲಿ ಸುಮಾರು 400ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಕೊಂಡರು. ಜನರಲ್ ಮೆಡಿಸಿನ್, ಶಸ್ತ್ರ ಚಿಕಿತ್ಸೆ ವಿಭಾಗ, ಹೆರಿಗೆ ಮತ್ತು ಸ್ತ್ರೀ ರೋಗ, ಕಿವಿ,ಮೂಗು ಮತ್ತು ಗಂಟಲು, ಮಕ್ಕಳ ವಿಭಾಗ, ನೇತ್ರ ವಿಭಾಗ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗ, ಮನೋರೋಗ ವಿಭಾಗ, ಶ್ವಾಸಕೋಶ ವಿಭಾಗ, ಎಲುಬು ಮತ್ತು ಕೀಲು ರೋಗ ತಪಾಸಣೆ ನಡೆಯಿತು.

LEAVE A REPLY

Please enter your comment!
Please enter your name here