ಪುತ್ತೂರು: ವರ್ತಕರ ಸಂಘ ಕುಂಬ್ರ ಮತ್ತು ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮಾ.19 ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಶಿಬಿರ ನಡೆಯಲಿದ್ದು ಉದ್ಯಮಿ ಮೋಹನದಾಸ ರೈ ಕುಂಬ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ಮಂಜುನಾಥ್ ಎಂ, ಸುಳ್ಯ ಡೆಂಟಲ್ ಕಾಲೇಜಿನ ಪ್ರೊ.ಕೃಷ್ಣಪ್ರಸಾದ್ ಎಲ್, ಕುಂಬ್ರ ಸಿಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಪತ್ರಕರ್ತ ಸಿಶೇ ಕಜೆಮಾರ್, ಗೌರವ ಅತಿಥಿಗಳಾಗಿ ಒಳಮೊಗ್ರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಹೀಮಾನ್ ಹಾಜಿ ಅರಿಯಡ್ಕ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ, ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ, ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ್ ರೈ ಕೊಪ್ಪಳ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ದಂತ ಕುಳಿ ತುಂಬಿಸುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಉಚಿತವಾಗಿ ದೊರೆಯಲಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಕಾರ್ಯದರ್ಶಿ ಭವ್ಯ ರೈ ಹಾಗೂ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.